ಮಹಾಜನ್ ಆಯೋಗದ ವರದಿಯಂತೆ ನಾವೂ ಕರ್ನಾಟಕಕ್ಕೆ ಸೇರುತ್ತೇವೆ-ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಕಲಕೋಟೆ ಜನತೆ ಎಚ್ಚರಿಕೆ. 

Promotion

ಅಕ್ಕಲಕೋಟೆ,ನವೆಂಬರ್,28,2022(www.justkannada.in):  ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಮಹಾರಾಷ್ಟ್ರದ ಜತ್ ತಾಲೂಕಿನ ಜನರು ನಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಘೋಷಣೆ ಕೂಗಿದ ಬೆನ್ನಲ್ಲೆ ಇದೀಗ ಅಕ್ಕಲಕೋಟ ತಾಲೂಕಿನ ಜನರೂ ಸಹ  ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ  ತಾಲೂಕಿನ ಜನರು ಇದೀಗ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಾಜನ್ ಆಯೋಗ ವರದಿಯಂತೆ ನಾವೂ ಕರ್ನಾಟಕ್ಕೆ ಹೋಗುತ್ತೇವೆ. 5 ದಶಕಗಳಿಂದ ಮಹಾರಾಷ್ಟ್ರ ಸರ್ಕಾರದಿಂದ ಗಡಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕುಡಿಯುವ ನೀರು, ರಸ್ತೆ, ಕನ್ನಡ ಶಾಲೆಗಳಿಗೆ ಸೌಲಭ್ಯ ಸಿಕ್ಕಿಲ್ಲ. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಗಡಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕು. ಇಲ್ಲದಿದ್ದರೆ ಮಹಾಜನ್ ವರದಿಯಂತೆ ನಾವು ಕರ್ನಾಟಕ್ಕೆ ಹೋಗುತ್ತೇವೆ ಎಂದು ಅಕ್ಕಲಕೋಟೆ ತಾಲ್ಲೂಕಿನ ಜನತೆ ಎಚ್ಚರಿಕೆ ನೀಡಿದ್ದಾರೆ.

Key words: we -will -join –Karnataka-Akkalakote -people – Maharashtra government