ಬೂತ್  ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ- ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

Promotion

ಬೆಂಗಳೂರು,ನವೆಂಬರ್,11,2023(www.justkannada.in):  ಬೂತ್ ಮಟ್ಟದಲ್ಲಿ ಗೆದ್ದರೇ ರಾಷ್ಟ್ರ ಗೆದ್ದಂತೆ ಎಂಬುದು ಜೆಪಿ ನಡ್ಡಾ ಅವರ ಕಲ್ಪನೆ. ಹೀಗಾಗಿ ಬೂತ್  ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು  ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಬೆಂಗಳೂರಿನ ಗಾಂಧಿನಗರದಲ್ಲಿ ಬೂತ್ ಮಟ್ಟದ ಅಧ್ಯಕ್ಷ ಶಶಿಧರ್ ಅವರ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಹಲವು ನಾಯಕರು ಬೆಳೆದಿದ್ದಾರೆ. ಹೀಗಾಗಿ ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಲ್ಲಿ ಪಕ್ಷವನ್ನ ಸಂಘಟನೆ ಮಾಡುತ್ತೇವೆ ಎಂದರು.

ಬಿಜೆಪಿ ಕಾರ್ಯಕರ್ತರ ಮೇಲೆ  ಕೇಸ್ ದಾಖಲು ವಿಚಾರ  ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ನಮ್ಮ ಕಾರ್ಯಕರ್ತರು ಹೋರಾಟಕ್ಕೆ ಹೆದರಿ ಕೂರಲ್ಲ. ಕಾಂಗ್ರೆಸ್ ನಾಯಕರು ಏನ್ ಮಾಡ್ತಾರೆ ಮಾಡಲಿ ಮುಂದೆ ಕಾಂಗ್ರೆಸ್ ಗೆ ತಕ್ಕ ಉತ್ತರ ಕೊಡ್ತೇವೆ ಎಂದರು.

Key words: We will- organize – party – booth level-BJP-state president -BY Vijayendra.