ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ- ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ.

Promotion

ಹಾಸನ,ಜೂನ್,9,2022(www.justkannada.in):  ನಾಳೆ ರಾಜ್ಯಸಭಾ ಚುನಾವಣೆ ಹಿನ್ನೆಲೆ ಈ ಮಧ್ಯೆ ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ. ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಗೆಲ್ಲುತ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಹೆಚ್.ಡಿ ರೇವಣ್ಣ, ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಯಾಕೆ ಪತ್ರ ಬರೆದಿದ್ದಾರೋ ಗೊತ್ತಿಲ್ಲ. ಸಿದ್ದರಾಮಯ್ಯ ಸೇರಿ ಯಾರೂ ನನ್ನ ಜೊತೆ ಮಾತನಾಡಿಲ್ಲ. ಕಾಂಗ್ರೆಸ್ ಗೆ ಗೌರವಯುತವಾಗಿ ಕೇಳುತ್ತೇನೆ, ಬಿಜೆಪಿ ಸೋಲಿಸಬೇಕೆಂದರೇ ನಮಗೆ ಬೆಂಬಲಿಸಿ. ನೂರಕ್ಕೆ ನೂರರಷ್ಟು ನಾವೇ ಗೆಲ್ಲುತ್ತೇವೆ ಎಂದರು.

ರಾಜ್ಯಸಭಾ ಚುನಾವಣೆಯಲ್ಲಿ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರಸ್ಪರ ತಿಕ್ಕಾಟ ನಡೆಸುತ್ತಿದ್ದು ವಾದ-ವಾಗ್ವಾದಗಳು ನಡೆಯುತ್ತಲೇ ಇದೆ. ಆದರೆ ಎರಡು ಪಕ್ಷಗಳಲ್ಲಿ ಯಾವ ಪಕ್ಷವೂ ಸಹ ತನ್ನ ಅಭ್ಯರ್ಥಿಯನ್ನ ಹಿಂಪಡೆಯಲು ಮುಂದಾಗಿಲ್ಲ. ಹೀಗಾಗಿ ರಾಜ್ಯಸಭಾ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.

Key words: We- win-rajyasabha-election-Former minister -HD Revanna