JK ALERT : ಮದುವೆ ಸಮಾರಂಭ , JUST 50 ಮಂದಿಗೆ ಮಾತ್ರ ಅವಕಾಶ ಕಲ್ಪಿಸಲು ಸರಕಾರದ ಚಿಂತನೆ..!

ಬೆಂಗಳೂರು, ಏ.17, 2021 : (www.justkannada.in news); ಕರೋನಾ ಎರಡನೇ ಅಲೆ ಆರ್ಭಟಕ್ಕೆ ತತ್ತರಿಸಿರುವ ರಾಜ್ಯ ಸರಕಾರ ಮತ್ತಷ್ಟು ಕಠಿಣ ನಿಯಾಮವಳಿಗಳ ಜಾರಿಗೆ ಮುಂದಾಗಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಈ ಪೈಕಿ ಮದುವೆ ಸಮಾರಂಭಗಳಲ್ಲಿ ಗರಿಷ್ಠ 50 ಮಂದಿ ಮಾತ್ರ ಭಾಗವಹಿಸಲು ಅವಕಾಶ ನೀಡಲು ಚಿಂತನೆ ನಡೆಸಿದ್ದು, ಇಂದು ಬೆಳಗ್ಗೆ ಸಚಿವತ್ರರು (ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಸುಧಾಕರ್ ) ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾಗಿದೆ.

ಮದುವೆಗೆ ಕೇವಲ 50 ಮಂದಿಗೆ ಮಾತ್ರ ಭಾಗವಹಿಸಲು ಪಾಸ್ ನೀಡುವುದು. ಒಂದು ವೇಳೆ ಇದನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರೆ ಅಂಥ ಕಲ್ಯಾಣ ಮಂಟಪವನ್ನು ವಶಕ್ಕೆ ಪಡೆದು ಬೀಗ ಜಡಿಯುವಂತೆ ಸೂಚಿಸಲಾಗಿದೆ.wedding-ceremony-government-thinking-just-50-member-only

ಹಾಲಿ, ರಾಜ್ಯ ಸರಕಾರ ಹೊರಡಿಸಿರುವ ಕೋವಿಡ್ ನಿಯಮಾವಳಿ ಪ್ರಕಾರ ಮದುವೆ ಸಮಾರಂಭದಲ್ಲಿ 200 ಮಂದಿ ಭಾಗವಹಿಸಲು ಅವಕಾಶವಿದೆ. ಆದರೆ ಸದ್ಯದ ಸ್ಥಿತಿಯಲ್ಲಿ ಹೆಚ್ಚುತ್ತಿರುವ ಕರೋನಾ ಸೋಂಕಿನ ಪ್ರಕರಣಗಳನ್ನು ಪರಿಗಣಿಸಿ ಇದನ್ನು ಮಾರ್ಪಾಡು ಮಾಡಲು ಸರಕಾರ ಉದ್ದೇಶಿಸಿದೆ ಎನ್ನಲಾಗಿದೆ.
ಈ ಸಲುವಾಗಿಯೇ ಇಂದು ನಡೆದ ಜಿಲ್ಲಾಧಿಕಾರಿಗಳ ಜತೆಗಿನ ವಿಡಿಯೋ ಸಂವಾದಲ್ಲಿ ಈ ಬಗ್ಗೆ ಚರ್ಚಿಸಿ ಅಭಿಪ್ರಾಯ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

key words: wedding ceremony-Government- thinking –  JUST- 50 member- only.