ವೀಕೆಂಡ್ ಕರ್ಫ್ಯೂ: ಸ್ವತಃ ಫೀಲ್ಡ್ ಗಿಳಿದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್…

weekend-curfew-bangalore-police-commissioner-kamal-pant
Promotion

ಬೆಂಗಳೂರು,ಏಪ್ರಿಲ್,24,2021(www.justkannada.in): ರಾಜ್ಯದಲ್ಲಿ ಹೆಚ್ಚಾಗಿರುವ ಕೊರೋನಾ 2ನೇ ಅಲೆ ಆರ್ಭಟ ತಗ್ಗಿಸಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದು , ಈ ಹಿನ್ನೆಲೆಯಲ್ಲಿ ಪೊಲೀಸರು ಫಿಲ್ಡ್ ಗಿಳಿದು  ಅನಗತ್ಯವಾಗಿ ಓಡಾಡುವವರಿಗೆ ವಾಹನ್ ಸೀಜ್ ಮಾಡಿ ದಂಡ ಹಾಕುತ್ತಿದ್ದಾರೆ.jk

ಈ ಮಧ್ಯೆ ಸ್ವತಃ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರೇ ಫೀಲ್ಡ್ ಗಿಳಿದಿದ್ದು ನಗರದ ಕೆ.ಆರ್ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ವಾಹನಗಳನ್ನ ಜಪ್ತಿ ಮಾಡಿರುವ ಬಗ್ಗೆ ಮಾಹಿತಿ ಪಡೆದರು.

ವೀಕೆಂಡ್ ಕರ್ಫ್ಯೂ ಉಲ್ಲಂಘನೆ ಮಾಡುವವರ ವಿರುದ್ಧ  ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು,  ಮಲ್ಲೇಶ್ವರಂ ಬಳಿ ಅನಗತ್ಯವಾಗಿ ಓಡಾಡುತ್ತಿದ್ದ 5 ಬೈಕ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.

Key words: Weekend curfew-Bangalore -Police Commissioner- Kamal Pant