ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ:  ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ- ಮೈಸೂರು ಡಿಸಿ ಬಗಾದಿ ಗೌತಮ್.

ಮೈಸೂರು,ಆಗಸ್ಟ್,6,2021(www.justkannada.in):  ಕೊರೋನಾ 3ನೇ ಅಲೆ ಭೀತಿ ಹಿನ್ನೆಲೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಕೊಡಗು, ದಕ್ಷಿಣ ಕನ್ನಡ, ತಮಿಳುನಾಡು ಗಡಿ ಜಿಲ್ಲೆ ಚಾಮರಾಜನಗರ, ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲ್ಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮಾತನಾಡಿರುವ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಹೆಚ್.ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮೈಸೂರಿನ ಪ್ರವಾಸಿ ತಾಣಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ದೈಹಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Weekend curfew -border –districts-Strict action – Kerala border- Mysore DC-Bagadi Gautam.