ಪಶ್ಚಿಮ ಬಂಗಾಳದಲ್ಲಿ ಸದ್ಯ ದೀದಿಗೆ ಸ್ವಲ್ಪ ಖುಷಿ, ಸ್ವಲ್ಪ ಕಹಿ!

Promotion

ಪಶ್ಚಿಮ ಬಂಗಾಳ, ಮೇ 02, 2021 (www.justkannada.in): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಸದ್ಯ ಟಿಎಂಸಿ 148 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 115 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಮಾಹಿತಿ ಹೊರ ಬಿದ್ದಿದೆ.

ನಂದಿಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಮುನ್ನಡೆ ಸಾಧಿಸಿದ್ದು, ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿ ಹಿನ್ನಡೆಯಾಗಿದೆ.

ಕರ್ನಾಟಕದ ಮೂರು ಕ್ಷೇತ್ರ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ8ರಿಂದಲೇ ಮತ ಎಣಿಕೆ ಕಾರ್ಯ ಭರದಿಂದ ಸಾಗಿದೆ.