ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ: ಬಸವರಾಜ ಹೊರಟ್ಟಿಗೆ ಗೆಲುವು: ಅಧಿಕೃತ ಘೋಷಣೆ ಬಾಕಿ.

ಬೆಳಗಾವಿ,ಜೂನ್,15,2022(www.justkannada.in): ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಮಧ್ಯೆ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಕುರಿತು ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.  ಈ ಮೂಲಕ ಸತತ 8 ನೇ ಬಾರಿಗೆ ಗೆಲುವು ಸಾಧಿಸಿ ದಾಖಲೆ ಬರೆದಿದ್ದಾರೆ. ಹೊರಟ್ಟಿ ಗೆಲುವಿನ ಬಗ್ಗೆ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾಡಲಿದೆ.SSLC examination -should not be- cancel-Basavaraja horatti

ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಬಸವರಾಜ ಗುರಿಕಾರ  ಮತ್ತು ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗಡದಿನ್ನಿಗೆ ಮುಖಭಂಗವಾಗಿದೆ. ಮೊದಲ ಸುತ್ತಿನಲ್ಲಿ  ಬಸವರಾಜ ಹೊರಟ್ಟಿಗೆ 6479 ಮತಗಳು  ಕಾಂಗ್ರೆಸ್‌ ನ ಬಸವರಾಜ ಗುರಿಕಾರಗೆ 3314 ಬಂದಿದ್ದವು. ಈ ಮೂಲಕ ಹೊರಟ್ಟಿ 3165 ಮತಗಳ ಮುನ್ನಡೆ ಸಾಧಿಸಿದ್ದರು. ಇದೀಗ ಬಸವರಾಜ ಹೊರಟ್ಟಿ ಅವರು ಗೆಲುವು ಸಾಧಿಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Key words: Western- Teachers –Constituency- Election –Basavaraja horatti- win