ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಮುಡಾ ಅಧಿಕಾರಿ

Promotion

ಮೈಸೂರು, ಮೇ 27, 2022 (www.justkannada.in): ಲಂಚ ಸ್ವೀಕರಿಸುವ ವೇಳೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜನಾ ಶಾಖೆ ಸದಸ್ಯ ಹಾಗೂ ಡಾಟಾ ಎಂಟ್ರಿ ಆಪರೇಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಟಿಪಿಎಂ ಜಿ.ಎಸ್.ಜಯಸಿಂಹ ಹಾಗೂ ಡಾಟಾ ಎಂಟ್ರಿ ಆಪರೇಟರ್(ಹೊರಗುತ್ತಿಗೆ ನೌಕರ) ಬಲೆಗೆ ಬಿದ್ದವರು.

ಬಡಾವಣೆಯೊಂದರ ಮಂಜೂರಾತಿಗಾಗಿ ಡೆವಲಪರ್ ವೇಣುಗೋಪಾಲ್ ಎಂಬುವರ ಬಳಿ 3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಸಂಬಂಧ ವೇಣುಗೋಪಾಲ್   ಎಸಿಬಿ ಯಲ್ಲಿ ದೂರು ದಾಖಲಿಸಿದ್ದರು.

ಇಂದು ತಮ್ಮ ಕಚೇರಿಯಲ್ಲಿ 50 ಸಾವಿರ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಎಸಿಬಿ ಎಸ್ಪಿ ವಿ.ಜೆ.ಸುಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.