ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುತ್ತಿರುವುದೇಕೆ…? ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್….

kannada t-shirts

ಬೆಂಗಳೂರು,ಜನವರಿ,1,2020(www.justkannada.in):  ಸಿಎಂ ಆದವರು ನಾನೇ ಇನ್ನು 2 ವರ್ಷ ಅಧಿಕಾರದಲ್ಲಿರುತ್ತೇನೆ ಎಂದು ಹೇಳುವ ಅಗತ್ಯವೇನಿದೆ. ಅವರ ಅಧಿಕಾರದ ಬಗ್ಗೆ ನಾವು ಪ್ರಶ್ನಿಸಿದ್ದೇವಾ? ಹಾಗಿದ್ದರೂ ಈ ಬಗ್ಗೆ ಸ್ಪಷ್ಟತೆ ನೀಡುವ ಅಗತ್ಯ ಏನಿದೆ?’ ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುತ್ತಿರುವುದೇಕೆ…?  ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.jk-logo-justkannada-mysore

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ ಶಿವಕುಮಾರ್, ‘ಬಿಜೆಪಿ ಶಾಸಕರೇ ಬೇರೆ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುವ ಸ್ಥಿತಿ ಎದುರಾಗಿದೆ ಎಂದರೆ, ಎಲ್ಲೋ ಏನೋ ಯಡವಟ್ಟಾಗಿದೆ, ಅಪಾಯ ಎದುರಾಗಿದೆ ಎಂಬ ಅನುಮಾನ ಮೂಡುತ್ತದೆ ಎಂದು ಲೇವಡಿ ಮಾಡಿದರು.

ದೇಶದಲ್ಲಿ ಕೊರೋನಾ ಹರಡಿಸಿದ್ಧೇ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು…

ಇಂಗ್ಲೆಂಡ್ ನಿಂದ ಬಂದವರಿಗೆ ರಾಜ್ಯದಲ್ಲಿ ವಿಳಾಸವಿದೆ. ವಿಮಾನ ನಿಲ್ದಾಣದಲ್ಲೇ ಅವರ ಪರೀಕ್ಷೆ ನಡೆಸಲು ಇವರಿಗೆ ಇದ್ದ ಕಷ್ಟವಾದರೂ ಏನು? ಆಡಳಿತದ ವಿಚಾರದಲ್ಲಿ ಈ ಸರ್ಕಾರ ಎಷ್ಟು ವಿಫಲವಾಗಿದೆ ಎಂಬುದಕ್ಕೆ ಇದೇ ಸಾಕ್ಷಿ. ದೇಶದಲ್ಲಿ ಕೊರೋನಾ ಸೋಂಕು ಹರಡಿಸಿದ್ದೇ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಎಂದು ಕಿಡಿಕಾರಿದರು.

ಆರಂಭದಲ್ಲೇ ಇದನ್ನು ನಿಯಂತ್ರಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ನಮ್ಮ ರಾಜ್ಯದಿಂದ ಯಾರೂ ಕೂಡ ಹೊರಗಿನವರಿಗೆ ಸೋಂಕು ಹರಡಿಸಿಲ್ಲ. ಬೇರೆ ಭಾಗದಿಂದ ಬಂದವರಿಂದಲೇ ಸೋಂಕು ಹರಡಿದೆ. ಅವರನ್ನು ಮೊದಲೇ ಪರೀಕ್ಷಿಸಿ ನಿಯಂತ್ರಣ ಮಾಡಬೇಕಿತ್ತು ಎಂದು ಡಿ.ಕೆ ಶಿವ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.

 ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶ ಸಮಾಧಾನ….

ಗ್ರಾಮ ಪಂಚಾಯಿತಿ ಫಲಿತಾಂಶದಿಂದ ನಮಗೆ ಸಮಾಧಾನವಾಗಿದೆ. ಈ ಚುನಾವಣೆಯಲ್ಲಿ ಎಷ್ಟೇ ಹಣದ ದುರುಪಯೋಗವಾಗಿದ್ದರೂ, ಬೇರೆ ಒತ್ತಡವಿದ್ದರೂ ನಮ್ಮ ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಇದು ಪಕ್ಷಾತೀತ ಚುನಾವಣೆಯಾದರೂ ಪಂಚಾಯ್ತಿಯಿಂದ ಸಂಸತ್ತಿನವರೆಗಿನ ಪಕ್ಷ ರಾಜಕಾರಣವನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ.  ಹೀಗಾಗಿ ಈ ಫಲಿತಾಂಶದಿಂದ ನಮಗೆ ಸಮಾಧಾನವಿದೆ. ಅಧಿಕಾರವಿದೆ ಎಂದು ಕೆಲವರು ನಮ್ಮವರನ್ನು ಕರೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ. ವಿರೋಧ ಪಕ್ಷದಲ್ಲಿದ್ದರೂ ನಮಗೆ ಉತ್ತಮ ಫಲಿತಾಂಶ ಸಿಕ್ಕಿದೆ. ಹಳ್ಳಿ ಜನ ಆಪರೇಷನ್ ರಾಜಕಾರಣದ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದರು.

ಈ ತಿಂಗಳ 5ರಿಂದ 18ರವರೆಗೂ ಪ್ರವಾಸದಲ್ಲಿರುತ್ತೇನೆ. ಬ್ಲಾಕ್ ಅಧ್ಯಕ್ಷರನ್ನು ಭೇಟಿ ಮಾಡಿ ಅವರ ಧ್ವನಿಯನ್ನು ಆಲಿಸಲು ನಿರ್ಧರಿಸಿದ್ದೇನೆ. 2021ರ ವರ್ಷ ನಮ್ಮ ಪಕ್ಷಕ್ಕೆ ಸಂಘಟನೆಯ ವರ್ಷ. ಸ್ಥಳೀಯವಾಗಿ ಏನೇನು ಸಮಸ್ಯೆ ಇದೆ ಎಂದು ಗಮನದಲ್ಲಿಟ್ಟುಕೊಂಡು ನಾವು ಹೋರಾಟ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.

 ಶಾಲೆ ಮುಚ್ಚಬೇಕು ಎಂದು ನಾನು ಹೇಳುವುದಿಲ್ಲ…..

ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಶಾಲೆ ಮುಚ್ಚಬೇಕು ಎಂದು ನಾನು ಹೇಳುವುದಿಲ್ಲ. ಶಾಲೆ ತೆರೆಯಬೇಕು. ಕೋವಿಡ್ ನಿಯಮ ಪಾಲಿಸಲಿ. ಮಕ್ಕಳಿಗೆ ವಿದ್ಯಾಭ್ಯಾಸ ಅಂತರವಿದ್ದರೆ ಕಲಿಕೆ ಗುಣಮಟ್ಟ ಕುಗ್ಗುತ್ತದೆ. ಶಿಕ್ಷಣ ಮೂಲಭೂತ ಅಗತ್ಯ ಆಗಿರುವುದರಿಂದ ಸರ್ಕಾರ ಶಾಲೆ ಆರಂಭಿಸಿದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದರು.

ಹೊಸ ವರ್ಷದ ಶುಭಾಶಯಗಳು:

ಹೊಸ ವರ್ಷದ ಹಿನ್ನೆಲೆಯಲ್ಲಿ ರಾಜ್ಯದ ಮಹಾಜನತೆಗೆ ಶುಭಾಶಯಗಳು. ಕಳೆದ ವರ್ಷ ಕೋವಿಡ್ ನಿಂದ ಇಡೀ ದೇಶ ಹಾಗೂ ಪ್ರಪಂಚಕ್ಕೆ ಎದುರಾಗಲಗಿದ್ದ ಆರ್ಥಿಕ, ಆರೋಗ್ಯದ ವಿಘ್ನಗಳೆಲ್ಲವೂ ನಿವಾರಣೆ ಆಗಲಿ ಎಂದು ತಾಯಿ ಚಾಮುಂಡೇಶ್ವರಿ ಹಾಗೂ ರಾಜ್ಯದಲ್ಲಿರುವ ಎಲ್ಲ ಗ್ರಾಮ ದೇವತೆಗಳು ಹಾಗೂ ಎಲ್ಲ ಧರ್ಮ ಪೀಠಗಳು ಹಾಗೂ ಗುರು ಹಿರಿಯರಲ್ಲಿ ನಾನು ಪ್ರಾರ್ಥನೆ ಮಾಡುತ್ತೇನೆ ಎಂದರು.

ಹೊಸ ವರ್ಷದಲ್ಲಿ ಸರ್ಕಾರ ಸಮಾಜದ ಪ್ರತಿಯೊಂದು ವರ್ಗದ ಬಗ್ಗೆಯೂ ಆಲೋಚನೆ ಮಾಡಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದರು.

ENGLISH SUMMARY….

Why is the CM clarifying himself? DKS
Bengaluru, Jan. 01, 2020 (www.justkannada.in): “What is the need to say that I will be in power for the next two years for a CM? Have we questioned about his term? What is the need to clarify this? Why is the CM clarifying himself?” questioned KPCC President D.K. Shivakumar.
Address the media persons at his residence in Sadashivanagar, in Bengaluru today, KPCC President D.K. Shivakumar said, “BJP leaders themselves are speaking about a change in the leadership. A situation has come where the Chief Minister himself is giving clarifications on his own, something somewhere appears to be wrong, I suspect something is going to happen,” he said.
Speaking about the Britain Corona variant he said, “Everyone who has come from Britain has addresses. What was the difficulty they present government had in testing them at the airport itself? This itself is proof of the failure of this government in this matter. It is the present State and Central governments that have spread the pandemic,” he alleged.
“If they would have controlled it in the initial stages itself we wouldn’t have to see this condition today. Nobody from our state has spread the virus. It is spreading from those who are coming from outside. They should have been more cautious,” he said.
Keywords: KPCC President D.K. Shivakumar/ Chief Minister/ Clarification/ Britain Corona variant

Key words: Why -chief ministers -swearing – themselves-KPCC President -D.K. Shivakumar.

website developers in mysore