ಗ್ರಾ.ಪಂಗೆ ಪತ್ನಿ ಅವಿರೋಧ ಆಯ್ಕೆ : ಪತಿ ಆತ್ಮಹತ್ಯೆ

Promotion

ಚಾಮರಾಜನಗರ,ಡಿಸೆಂಬರ್,16,2020(www.justkannada.in)  ಗ್ರಾ.ಪಂ.ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದ ಮಹಿಳೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.I didn't knew CM BSY will think so cheaply - KPCC President D.K. Shivakumar

ಚಾಮರಾಜನಗರ ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ದೊಡ್ಡರಾಯಪೇಟೆಯಲ್ಲಿ ಈ ಘಟನೆ ನಡೆದಿದ್ದು, ನಿಂಗರಾಜು(27) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದಾರೆ.

ಮೃತನ ಪತ್ನಿ ಗಗನಾ ಎಂಬಾಕೆ ಎರಡು ದಿನಗಳ ಹಿಂದೆಯಷ್ಟೇ ಗ್ರಾಮದ ಎರಡನೇ ವಾರ್ಡಿನಿಂದ ಅವಿರೋಧವಾಗಿ ಆಯ್ಕೆಯಾಗಿದ್ದರು. ಆದರೆ, ಪತ್ನಿಯ ಅವಿರೋಧ ಆಯ್ಕೆಯಿಂದ ಸಂತಸಗೊಂಡು ಸಂಭ್ರಮಿಸಬೇಕಾದ ಪತಿಯೇ ಬಾರದಲೋಕಕ್ಕೆ ಪಯಣ ಬೆಳೆಸಿದ್ದಾನೆ. ನಿಂಗರಾಜು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Wife,unanimous,choice,grapam,husband,committed,suicide

ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಚಾಮರಾಜನಗರ ಪೂರ್ವ ಠಾಣೆ ಪಿಎಸ್ಐ ಮಾಹಿತಿ ನೀಡಿದ್ದಾರೆ.

key words : Wife-unanimous-choice-grapam-husband-committed-suicide