ಕಾಡು ಮನುಷ್ಯ ನಳೀನ್ ಕುಮಾರ್ ಕಟೀಲ್ ನನ್ನು ಬಿಜೆಪಿ ತಕ್ಷಣ ಕಾಡಿಗೆ ಬಿಡಬೇಕು : ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಬೆಂಗಳೂರು,ಅಕ್ಟೋಬರ್,22,2020 : ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಆಕ್ರೋಶವ್ಯಕ್ತಪಡಿಸಿದ್ದಾರೆ.

jk-logo-justkannada-logo

ನಳಿನ್ ಕುಮಾರ್ ಕಟೀಲ್  Immature fellow

ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲ್ ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” Immature fellow ಎಂದು ಕಿಡಿಕಾರಿದ್ದಾರೆ.

ನಾಲಗೆ ಮಾತ್ರ ಅಲ್ಲ ಬೆನ್ನಿನಲ್ಲಿಯೂ ಎಲುಬು ಇಲ್ಲ…

ನಳಿನ್ ಕುಮಾರ್ ಕಟೀಲ್ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ಧರಾಮಯ್ಯ ಟೀಕಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ‘ಸಂತೋಷ’ಕ್ಕಾಗಿ ಪಕ್ಷದ ಅಧ್ಯಕ್ಷ ಮಾಡಿದ್ದಾರೆ.

wild,man,Nalin Kumar Kateel,BJP,should,leave,forest,immediately,Former CM Siddaramaiah,teased

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಯಡಿಯೂರಪ್ಪನವರ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸುವುದು ಇವರ ಟಾಸ್ಕ್

ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಹೇಳಿದ್ದಾರೆ.

ಹಿರಿಯರು, ಮಾನವಂತರು ಉಳಿದಿದ್ದರೆ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ

ಮಾತೆತ್ತಿದರೆ ಸಂಸ್ಕಾರ,ಸಂಸ್ಕೃತಿ ಎಂದು ಬೋದನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು,ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.

key words : wild-man-Nalin Kumar Kateel
-BJP-should-leave-forest-immediately-Former CM Siddaramaiah-teased