ವಿಧಾನಸಭಾ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮಗಳ ನಿಷೇಧ ಹಿಂಪಡೆಯಲು ಆಗ್ರಹ: ಡಿಸಿ ಮೂಲಕ ಸ್ಪೀಕರ್ ಗೆ ಮನವಿ

ಮಂಗಳೂರು,ಅ,14,2019(www.justkannada.in):  ವಿಧಾನ ಮಂಡಲ ಕಲಾಪಗಳ ವರದಿಗೆ ವಿದ್ಯುನ್ಮಾನ ಮಾಧ್ಯಮಗಳನ್ನು ನಿಷೇದಿಸಿರುವುದು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮೂಲಕ ವಿಧಾನ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಮಹತ್ವದ ಸ್ಥಾನವನ್ನು ಹೊಂದಿದೆ. ಜನ ಸಾಮಾನ್ಯರ ಆಶೋತ್ತರಗಳನ್ನು ನಾಡಿನ  ಸರ್ವಾಂಗೀಣ ಅಭಿವೃದ್ಧಿ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ವಿಧಾನ ಮಂಡಲ ಕಲಾಪಗಳನ್ನು ಟಿವಿ ಮಾಧ್ಯಮಗಳು ಪ್ರಸಾರ ಮಾಡುವುದಕ್ಕೆ ಅವಕಾಶ ಕಲ್ಪಿಸುವುದು ಸರಿಯಾದ ಕ್ರಮ. ಇದರಿಂದ ಕಲಾಪಗಳನ್ನು ಇನ್ನಷ್ಟು ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ನಡೆಸಲು ಸಾಧ್ಯವಾಗುತ್ತದೆ.

ಅಗತ್ಯ ಬಿದ್ದರೆ ಅದಕ್ಕೊಂದು ಮಾಧ್ಯಮ ಸಂಹಿತೆ ರೂಪಿಸಬಹುದು .ಆದರೆ ಯಾವುದೇ ಚರ್ಚೆ ಅಭಿಪ್ರಾಯ ಪಡೆಯದೆ ಏಕಾಏಕಿ ನಿರ್ಬಂಧಿಸಿರುವುದು ಸರಿಯಲ್ಲ. ಈ ಬಗ್ಗೆ ತಕ್ಷಣ ಪರಿಶೀಲನೆ ಮಾಡಿ ಇಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಹೇರಿದ ನಿರ್ಬಂಧ ಆದೇಶವನ್ನು ಹಿಂಪಡೆದು ಕೊಳ್ಳಬೇಕೆಂದು ಸಂಘವು ವಿನಂತಿಸುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮೂಲಕ ವಿಧಾನ ಸಭೆಯ ಅಧ್ಯಕ್ಷರಿಗೆ ನೀಡಿದ ಮನವಿಯಲ್ಲಿ ತಿಳಿಸಲಾಗಿದೆ .

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ,ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಹಿಲಾರಿ ಕ್ರಾಸ್ತ, ಭಾಸ್ಕರ್ ರೈ ಕಟ್ಟ ಉಪಸ್ಥಿತರಿದ್ದರು .

key words:  withdrawal – electronic media – assembly -Appeal – Speaker