ಕಾಡಾನೆ ದಾಳಿಗೆ ಮಹಿಳೆ ಬಲಿ: ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ.

ರಾಮನಗರ,ಆಗಸ್ಟ್,9,2022(www.justkannada.in): ರಾಜ್ಯದ ಹಲವೆಡೆ ಹೆಚ್ಚದ ಕಾಡಾನೆ ದಾಳಿ ಹೆಚ್ಚಾಗುತ್ತಿದ್ದು, ನಿನ್ನೆ ಹಾಸನ ಜಿಲ್ಲೆಯಲ್ಲಿ ರೈತರೊಬ್ಬರು ಕಾಡಾನೆ ದಾಳಿಗೆ ಮೃತಪಟ್ಟಿದ್ದರು. ಇದೀಗ ರಾಮನಗರ ಜಿಲ್ಲೆಯಲ್ಲೂ ಅಂತಹದೊಂದು ಘಟನೆ ನಡೆದಿದೆ.

ಕಾಡಾನೆ ದಾಳಿಗೆ ಮಹಿಳೆ ಮೃತಪಟ್ಟಿರುವ ಘಟನೆ ರಾಮನಗರದ ಚಿನ್ನಗನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.  55 ವರ್ಷದ ಚನ್ನಮ್ಮ ಮೃತಪಟ್ಟ ಮಹಿಳೆ. ಚನ್ನಮ್ಮ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ಚಿನ್ನಗನ ಹೊಸಹಳ್ಳಿ, ಬಿವಿ ಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ಹೆಚ್ಚಾಗಿದ್ದು ಈ ಬಗ್ಗೆ ಅರಣ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  woman dead- attack-elephant-villagers –against- forest officer