ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವು: ಬೈಕ್ ಸವಾರನಿಗೆ ಗಂಭೀರ ಗಾಯ.

kannada t-shirts

ಮೈಸೂರು,ನವೆಂಬರ್,15,2021(www.justkannada.in): ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಟೀ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.

ಟಿ.ನರಸೀಪುರ ತಾಲ್ಲೂಕಿನ ಆಲಗೂಡು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.  ಮಾಡ್ರಹಳ್ಳಿ ಗ್ರಾಮದ 35 ವರ್ಷದ ಮಂಜುಳಾ ಮೃತಪಟ್ಟವರು.  ಬೈಕ್ ಸವಾರ 40 ವರ್ಷದ ಚಿಕ್ಕಸ್ವಾಮಿ ಗೆ ಗಂಭೀರ ಗಾಯಗಳಾಗಿದೆ. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.nice road-Car overturn-driver-death 

ಈ ಕುರಿತು ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Woman –death- – tipper -bike collide-  mysore

website developers in mysore