ಕೆಲಸಕ್ಕೆ ಹೋಗುವ ವೇಳೆ ದುರಂತ: ಖಾಸಗಿ ಬಸ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು.

ಬೆಂಗಳೂರು,ಜನವರಿ,24,2023(www.justkannada.in):  ಕೆಲಸಕ್ಕೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್​ ಡಿಕ್ಕಿಯಾಗಿ ಮಹಿಳೆ  ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಶವಂತಪುರದ ಸತ್ವ ಅಪಾರ್ಟ್​​ಮೆಂಟ್​ ಬಳಿ ಈ ಘಟನೆ  ನಡೆದಿದೆ. ವಿನುತಾ ಮೃತಪಟ್ಟ ಮಹಿಳೆ. ವಿನುತ ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಈ ನಡುವೆ ಇಂದು ಕೆಲಸಕ್ಕೆ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ಫೋನ್ ಬಂತು ಎಂದು ಗಾಡಿ ಸೈಡಿಗೆ ಹಾಕಿ ವಿನುತಾ ಮಾತನಾಡುತ್ತಿದ್ದರು. ಈ ವೇಳೆ ಹಿಂದೆಯೇ ಬಸ್ ನಿಲ್ದಾಣದಲ್ಲಿ ಜನರನ್ನು ಹತ್ತಿಸಿ ಕೊಳ್ಳುತ್ತಿದ್ದ ಬಸ್ ಚಾಲಕ ಏಕಾಏಕಿ ಬಸ್ ಚಾಲನೆ ಮಾಡಿದ್ದಾನೆ.

ಈ ಸಮಯದಲ್ಲಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದು ಮಹಿಳೆ ವಿನುತಾ ತಲೆ ಮೇಲೆ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಯಶವಂತರಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Key words: woman -died – spot – hit – private bus.