ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ; ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕ್ರಮಕ್ಕೆ ಆಗ್ರಹ.

Promotion

ಬೆಂಗಳೂರು,ಜನವರಿ,19,2022(www.justkannada.in):  ದೂರು ನೀಡಲು ಹೋದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ ಕೇಳಿ ಬಂದಿದೆ.

ಹೆಣ್ಣೂರು ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಮಹಿಳೆಯೊಬ್ಬರು ಪೊಲೀಸ್ ಆಯುಕ್ತರಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಜನವರಿ 13 ರಂದು ಬಾಡಿಗೆದಾರರು ಮತ್ತು ಸಂತ್ರಸ್ತ ಮಹಿಳೆ ನಡುವೆ ಗಲಾಟೆ ನಡೆದಿತ್ತು.  ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ದೂರು ನೀಡಲು ಹೆಣ್ಣೂರು ಪೊಲೀಸ್  ಠಾಣೆಗೆ ತೆರಳಿದ್ದು ಈ ವೇಳೆ ಪೊಲೀಸ್ ಇನ್ಸ್ ಪೆಕ್ಟರ್ ವಸಂತ್ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

Key words: Woman – sexual harassment-Police Inspector