ಮೊಬೈಲ್ ಅಂಗಡಿಯಲ್ಲಿ ಕೆಲಸಕ್ಕಿದ್ದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು…

Promotion

ಮೈಸೂರು,ಮೇ,13,2019(www.justkannada.in): ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಸರಸ್ವತಿಪುರಂನಲ್ಲಿ ಈ ಘಟನೆ ನಡೆದಿದೆ.  ಬೆಂಗಳೂರು ಮೂಲದ ನಿವಾಸಿ ಗೀತಾ(24) ಮೃತಪಟ್ಟ ಮಹಿಳೆ ಎಂದು  ಗುರುತಿಸಲಾಗಿದೆ. ಈಕೆ ನಗರದ ಅಕ್ಷಯ್ ಭಂಡಾರ್ ಬಳಿ ಇರುವ ಮೆಗಾ ಮೊಬೈಲ್ ಶೋ ರೂಂ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಸರಸ್ವತಿಪುರಂನಲ್ಲಿರುವ ಪಿಜಿಯಲ್ಲಿ ಉಳಿದುಕೊಂಡಿದ್ದರು.

ಎರಡು ವರ್ಷದ ಹಿಂದೆ ಬೆಂಗಳೂರಿನ ನಿವಾಸಿಯೋರ್ವನನ್ನು ಪ್ರೀತಿಸಿ ವಿವಾಹವಾಗಿದ್ದು, ಆತ ಬೆಂಗಳೂರಿನಲ್ಲಿಯೇ ಉದ್ಯೋಗದಲ್ಲಿದ್ದ ಎನ್ನಲಾಗಿದೆ.  ನಿನ್ನೆ ಪಿ.ಜಿ.ಯ ತನ್ನ ರೂಮಿನಿಂದ ಎಷ್ಟು ಹೊತ್ತಾದರೂ ಹೊರಗೆ ಬಾರದೇ ಇರುವುದನ್ನು ಗಮನಿಸಿದ ಆಕೆಯ ಸ್ನೇಹಿತ ಬಾಗಿಲು ತೆರೆದು ನೋಡಿದ ವೇಳೆ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಕೂಡಲೇ ಪಿ.ಜಿ.ಯ ಮಾಲೀಕರಿಗೆ ಮಾಹಿತಿ ನೀಡಿದ್ದು, ಪಿ.ಜಿ.ಯ ಮಾಲೀಕರು ಸರಸ್ವತಿಪುರಂ ಪೊಲೀಸ್ ಠಾಣೆಯಗೆ ದೂರು ನೀಡಿದ್ದಾರೆ.

Key words: woman- working – mobile shop- hangs -mysore