ಸರ್ವಾಧಿಕಾರಿ ಬಿಜೆಪಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ: ಪಕ್ಷದ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಕಿವಿಮಾತು

Promotion

ಬೆಂಗಳೂರು, ಸೆಪ್ಟೆಂಬರ್ 18, 2023 (www.justkannada.in): ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ ನಾಯಕರ ವಿರುದ್ಧ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು ಎಂದು ಕೂಡ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ.

ಡಿಎಂಕೆಯ ಇಬ್ಬರು ನಾಯಕರು ಸನಾತನ ಧರ್ಮ ಕುರಿತು ನೀಡಿದ ಹೇಳಿಕೆ ಬಳಸಿಕೊಂಡು ಇಂಡಿಯಾ ಕೂಟದ ವಿರುದ್ಧ ಬಿಜೆಪಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಸಲಹೆ ನೀಡಿದ್ದಾರೆ.

ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು, ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ ನಾಯಕರ ವಿರುದ್ಧ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು.

ಸೈದ್ಧಾಂತಿಕ ಸ್ಪಷ್ಟತೆಯೊಂದಿಗೆ ಜನರ ಸಮಸ್ಯೆಗಳ ಬಗ್ಗೆ ಗಮನ ಕೇಂದ್ರೀಕರಿಸಬೇಕು ಎಂದು ಸಲಹೆ ನೀಡಿದ್ದಾರೆ.