ವಿಶ್ವ ಅಥ್ಲೆಟಿಕ್ ಚಾಂಪಿಯನ್’’ಷಿಪ್: 19 ವರ್ಷಗಳ ಬಳಿಕ ಭಾರತಕ್ಕೆ ಪದಕ ತಂದ ನೀರಜ್ ಚೋಪ್ರಾ

kannada t-shirts

ಬೆಂಗಳೂರು, ಜುಲೈ 24, 2022 (www.justkannada.in): ಟೋಕಿಯೊ ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕಕ್ಕೆ ಗೆದ್ದಿದ್ದಾರೆ.

ಇಂದು ನಡೆದ ಫೈನಲ್‌ನಲ್ಲಿ ಭಾರತದ ನೀರಜ್‌, ತಮ್ಮ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್‌ ದೂರ ಎಸೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಇಡೀ ದೇಶದ ಚಿತ್ತ, ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಚೋಪ್ರಾ ಅವರ ಮೇಲಿತ್ತು. ಸ್ಪರ್ಧೆಯಲ್ಲಿ ಗ್ರೆನಾಡದ ಆಯಂಡರ್ಸನ್‌ ಪೀಟರ್ಸ್‌ ಅವರು ಚೋಪ್ರಾಗಿಂತ ಉತ್ತಮ ಸಾಧನೆ ತೋರಿದರು.

ನೀರಜ್‌ ಚೋಪ್ರಾ ಅವರು ಬೆಳ್ಳಿ ಸಾಧನೆ ಮಾಡುವ ಮೂಲಕ ವಿಶ್ವ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನಲ್ಲಿ 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟರು.

 

website developers in mysore