ಜೂನ್ 18ರಿಂದ ವಿಶ್ವ ಟೆಸ್ಟ್ ಚಾಂಪಿಯನ್ಸ್’ಶಿಪ್ ಫೈನಲ್ಸ್: ಕನ್ನಡಿಗ ಪ್ರಸಿದ್ಧ ಕೃಷ್ಣಗೆ ಚಾನ್ಸ್?

Promotion

ಬೆಂಗಳೂರು, ಮೇ 07, 2021 (www.justkannada.in): ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಜೂನ್ 18ರಿಂದ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ.

ಇದಕ್ಕಾಗಿ ಇನ್ನೆರಡು ದಿನಗಳಲ್ಲಿ ಭಾರತ ತಂಡ ಪ್ರಕಟವಾಗಲಿದ್ದು, ಈ ತಂಡದಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವಕಾಶ ಪಡೆಯುವ ಸಾಧ್ಯತೆ ಇದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿದ್ದ ತಂಡವನ್ನೇ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್‌ಗೂ ಆಯ್ಕೆ ಸಾಧ್ಯತೆ ಇದೆ.

ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರನ್ನು ಆಯ್ಕೆ ಮಾಡುವ ಸಂಭವವಿದೆ.