ಸೌತಾಂಪ್ಟನ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಸ್!

Promotion

ಬೆಂಗಳೂರು, ಮಾರ್ಚ್ 09, 2021 (www.justkannada.in): ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಸೌತಾಂಪ್ಟನ್‌ನಲ್ಲಿ ನಡೆಯಲಿದೆ.

ಈ ಹಿಂದೆ ನಿರ್ಧಾರವಾಗಿದ್ದಂತೆ ಫೈನಲ್ ಕ್ರಿಕೆಟ್‌ನ ಅತ್ಯಂತ ಶ್ರೇಷ್ಠ ಸ್ಥಳ ಲಾರ್ಡ್ಸ್‌ನಲ್ಲಿ ಆಡಬೇಕಿತ್ತು, ಆದರೆ ಇದನ್ನು ಬದಲಾಯಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಖಚಿತಪಡಿಸಿದ್ದಾರೆ.

ಸೌತಾಂಪ್ಟನ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾಗವಹಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ಗಂಗೂಲಿ ತಿಳಿಸಿದ್ದಾರೆ.

ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕೂಡ ಸುದ್ದಿ ಸಂಸ್ಥೆ ಎಎನ್‌ಐಗೆ ಇದನ್ನು ದೃಢಪಡಿಸಿದ್ದಾರೆ.