ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್.

ಬೆಂಗಳೂರು,ಡಿಸೆಂಬರ್,25,2021(www.justkannada.in):  ಹೊಸ ವರ್ಷಾಚರಣೆಯನ್ನ ಸರ್ಕಾರದ ಮಾರ್ಗಸೂಚಿ ಪ್ರಕಾರವೇ ಆಚರಿಸಬೇಕು. ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಪೊಲೀಸ್ ಆಯುಕ್ತ ಕಮಲ್ ಪಂತ್,  ನ್ಯೂ ಇಯರ್ ಸೆಲಬ್ರೇಷನ್ ಅನ್ನ ಸರ್ಕಾರ ಗೈಡ್ ಲೈಸ್ ನಂತೆ ಆಚರಿಸಬೇಕು. ಸಾರ್ವಜನಿಕವಾಗಿ ಆಚರಿಸುವಂತಿಲ್ಲ ಹೋಟೆಲ್ ಪಬ್ ಎಲ್ಲಿಯೂ ವಿಶೇಷ ಕಾರ್ಯಕ್ರಮ ಇರುವುದಿಲ್ಲ  ನ್ಯೂ ಇಯರ್ ಆಚರಣೆಗೆ ನಿಯಮ ಪಾಲನೆ ಕಡ್ಡಾಯ ಎಂದರು.

ಬ್ರಿಗೇಡ್ ರೋಡ್ ನಲ್ಲಿ ಯಾವುದೇ ಜನರು ಸೇರುವಂತಿಲ್ಲ.  ಜನಜೀವನ ನಾರ್ಮಲ್ ಆಗಿರಬೇಕು ಹೋಟೆಲ್ ಪಬ್   ಮಾಲೀಕರ ಜತೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ.  ಎಂಜಿ ರಸ್ತೆ ಬ್ರಿಗೇಡ್ ರಸ್ತೆ ಓಪನ್ ಇರುತ್ತದೆ.  ಜನ ಸಂಚಾರಕ್ಕೆ ಅವಕಾಶ ಇರುತ್ತದೆ. ಆದ್ರೆ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ ಎಂದು ಕಮಲ್ ಪಂತ್ ಹೇಳಿದರು.

ಡಿಸೆಂಬರ್ 31ರ ಕರ್ನಾಟಕ ಬಂದ್ ಕುರಿತು ಪ್ರತಿಕ್ರಿಯಿಸಿದ ಕಮಲ್ ಪಂತ್,  ಒತ್ತಾಯ ಪೂರ್ವಕವಾಗಿ ಯಾವುದೇ ಬಂದ್ ನಡೆಸುವಂತಿಲ್ಲ. ಸ್ವ ಇಚ್ಛೆಯಿಂದ ಬಂದ್ ಆಚರಿಸಿದರೇ ಅಡ್ಡಿಯಿಲ್ಲ. ಬಲವಂತವಾಗಿ ಬಂದ್ ಮಾಡಿಸಿದರೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು.

Key words: You- can’t – New Year-celebration- public-Bangalore City- Police Commissioner -Kamal Pant.