ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಸಾವು.

Promotion

ಬೆಂಗಳೂರು,ಮೇ,16,2022(www.justkannada.in):  ಬೈಕ್ ಅಪಘಾತವಾಗಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜಿಕೆವಿಕೆ ಬಳಿ ಅಪರಿಚಿತ ಯುವಕ ಬೈಕ್ ನಿಂದ ಬಿದ್ದು ಗಾಯಗೊಂಡಿದ್ದನು. ಈ ವೇಳೆ ಆಟೋ ಚಾಲಕರೊಬ್ಬರು ಆ ಯುವಕನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ನೀಡುವಾಗ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಯುವಕನ ವಿಳಾಸವನ್ನ ಪೊಲೀಸರು ಪತ್ತೆ ಹಚ್ಚುತ್ತಿದ್ದು, ಯಲಹಂಕ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಯುವಕನ ಮೃತದೇಹ ಇಡಲಾಗಿದೆ. ಇತ್ತ ಅಪಘಾತವಾದ ಸ್ಥಳದಲ್ಲಿದ್ದ ಬೈಕ್ ಕೂಡ ನಾಪತ್ತೆಯಾಗಿದೆ.  ಯಲಹಂಕ ಸಂಚಾರಿ ಪೊಲೀಸ್ ಠಾಣಯಲ್ಲಿ ಪ್ರಕರಣ ದಾಖಲಾಗಿದೆ.

Key words: young man – bike accident -died – heart attack.