ಸಿಎಂ ಕಾರ್ಯಕ್ರಮದಲ್ಲಿ ಕರಪತ್ರ ಎಸೆದ ಯುವಕ ಪೊಲೀಸರ ವಶಕ್ಕೆ….

Promotion

ದಾವಣಗೆರೆ,ಜ,15,2020(www.justkannada.in): ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಸಿಎಂ ಬಿಎಸ್ ಯಡಿಯೂರಪ್ಪ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಕರಪತ್ರ ಎಸೆದ ಯುವಕನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದಾವಣಗೆರೆ ಹರಿಹರ ಆರೋಗ್ಯ ಮಾತೆ ಚರ್ಚ್ ನಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಹ ಪಾಲ್ಗೊಂಡಿದ್ದರು. ಈ ವೇಳೆ ಕಾರ್ಯಕ್ರಮದಲ್ಲಿ ಯುವಕನೊಬ್ಬ ಕರಪತ್ರ ಎಸೆದು ಸದಾಶಿವ ಆಯೋಗದ ವರದಿ ಜಾರಿಮಾಡಬೇಕು ದಲಿತರಿಗೆ ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿದನು.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಕರ ಪತ್ರ ಎಸೆದ ಯುವಕನನ್ನ ವಶಕ್ಕೆ ಪಡೆದಿದ್ದಾರೆ.

Key words: Youth- arrested –throwing- pamphlets – CM program-davanagere