ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಯುವಜನ ಮಹೋತ್ಸವ: ರಾಕಿಂಗ್ ಸ್ಟಾರ್ ಯಶ್ ನೋಡಲು ಮುಗಿಬಿದ್ದ ವಿದ್ಯಾರ್ಥಿಗಳು.

Promotion

ಮೈಸೂರು,ಆಗಸ್ಟ್,11,2022(www.justkannada.in): 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಮೈಸೂರು ವಿಶ್ವ ವಿದ್ಯಾನಿಲಯ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರನ್ನ ನೋಡಲು ವಿದ್ಯಾರ್ಥಿಗಳು ಮುಗಿಬಿದ್ದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಯುವಜನ ಮಹೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವುದರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನಟ ಯಶ್, ಉನ್ನತ ಶಿಕ್ಷಣವನ್ನು ಸಚಿವ ಅಶ್ವಥ್ ನಾರಾಯಣ್,  ಸಂಸದ ಪ್ರತಾಪ್ ಸಿಂಹ, ಸ್ಥಳೀಯ ಶಾಸಕರಾದ ಜಿ.ಟಿ ದೇವೇಗೌಡ, ಎಲ್ ನಾಗೇಂದ್ರ, ರಾಮದಾಸ್ ಸೇರಿದಂತೆ ಹಲವು ಗಣ್ಯರ ಭಾಗಿಯಾಗಿದ್ದರು.

ಕಾರ್ಯಕ್ರಮದಲ್ಲಿ ಕನ್ನಡದ ಕಣ್ಮಣಿ ರಾಕಿಂಗ್ ಸ್ಟಾರ್ ಯಶ್  ಕೇಂದ್ರ ಬಿಂದುವಾಗಿದ್ದು, ಮಹಾರಾಜ ಕಾಲೇಜು ಮೈದಾನದಲ್ಲಿ ರಾಕಿ ರಾಕಿ ರಾಕಿ ಘೋಷಣೆಯೊಂದಿಗೆ ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಿಕ್ಕಿರಿದು ತುಂಬಿದ್ದರು.  ರಾಕಿಂಗ್ ಸ್ಟಾರ್ ಯಶ್ ನೋಡಲು ವಿದ್ಯಾರ್ಥಿ ವೃಂದ ಮುಗಿಬಿದ್ದ ಪ್ರಸಂಗ ಕಂಡು ಬಂತು. ಮೈಸೂರಿಗೆ ವಿಶ್ವ ವಿದ್ಯಾನಿಲಯ ಸಹಸ್ರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Key words: Youth Festival – Mysore –Maharaja- College- Grounds-rocking star –Yash-mysore university