Wednesday, August 26, 2026

BDA Apartments

Home Front Page ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಇಳಿಕೆ

ಬೆಂಗಳೂರು. ಆಗಸ್ಟ್ 28, 2021 (www.justkannada.in): ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ.

ಶನಿವಾರದ ಅಂತ್ಯಕ್ಕೆ 1,229 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,45,993ಕ್ಕೆ ಏರಿಕೆಯಾಗಿದೆ.

24 ಗಂಟೆಯಲ್ಲಿ 13 ಮಂದಿ ಬಲಿಯಾಗಿದ್ದಾರೆ. ಸಾವಿನ ಸಂಖ್ಯೆ 37,261ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 310 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,36,925ಕ್ಕೆ ಏರಿಕೆಯಾಗಿದೆ. ಇನ್ನು ನರಗದಲ್ಲಿ ಶೂನ್ಯ ಸಾವು ವರದಿಯಾಗಿದೆ.

ರಾಜ್ಯದಲ್ಲಿ ಇಂದು 1,289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,89,809ಕ್ಕೆ ಏರಿಕೆಯಾಗಿದೆ. ಇನ್ನು 18,897 ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು 1,83,642 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,229 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.66ಕ್ಕೆ ಇಳಿದಿದೆ.