ಬೆಂಗಳೂರು,ಆಗಸ್ಟ್,14,2026 (www.justkannada.in): ರಾಜ್ಯ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭವಾಗಿದ್ದು, ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾದರು.
ರಾಜ್ಯ ವಿಧಾನಸಭೆಯಲ್ಲಿ ನೂತನ ಸ್ಪೀಕರ್ ಆಗಿ ಗದಗ ಜಿಲ್ಲೆಯ ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿ.ಎಸ್. ಪಾಟೀಲ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಪ್ರಸ್ತಾಪಿಸಿದರೆ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಈ ಪ್ರಸ್ತಾಪಕ್ಕೆ ಪೂರ್ಣ ಬೆಂಬಲ ಸೂಚಿಸಿ ಅನುಮೋದನೆ ನೀಡಿದರು.
ಆಯ್ಕೆಯಾದ ನಂತರ ನೂತನ ಸ್ಪೀಕರ್ ಜಿಎಸ್ ಪಾಟೀಲ್ ಅವರನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಉಪಮುಖ್ಯಮಂತ್ರಿ ಪರಮೇಶ್ವರ್ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸ್ಪೀಕರ್ ಪೀಠಕ್ಕೆ ಗೌರವಪೂರ್ವಕವಾಗಿ ಕರೆದೊಯ್ದು ಅಭಿನಂದನೆಗಳನ್ನು ಸಲ್ಲಿಸಿದರು.
Key words: G.S. Patil, elected, unopposed, new, Assembly Speaker







