ಮಳೆಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ- ಶಾಸಕ ಹೆಚ್.ಕೆ ಪಾಟೀಲ್ ಆರೋಪ

ಗದಗ,ಸೆಪ್ಟಂಬರ್,9,2022(www.justkannada.in):  ಮಳೆಯಿಂದಾಗಿ ಸಂಕಷ್ಟಕ್ಕೊಳಗಾದ ರೈತರು, ಬಡವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಕಾಂಗ್ರೆಸ್ ಶಾಸಕ ಹೆಚ್.ಕೆ ಪಾಟೀಲ್ ಆಗ್ರಹಿಸಿದರು.

ಗದಗ-ಬೆಟಗೇರಿ ನಗರದಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಕೆ ಪಾಟೀಲ್, ಮಳೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಳೇಯಿಂದಾಗಿ ಗದಗ -ಬೆಟಗೇರಿ ನಗರದಲ್ಲಿ ಸಾಕಷ್ಟು ಹಾನಿಯುಂಟಾಗಿದೆ.Honorary -Doctorate -former Minister- HK Patil

ಸರ್ಕಾರ ಸೂಕ್ತ ಪರಿಹಾರ ನೀಡುವಲ್ಲಿ  ವಿಫಲವಾಗಿದೆ. ಹೀಗಾಗಿ ಸಂಕಷ್ಟಕ್ಕೆ ಒಳಗಾದ ಬಡವರು ರೈತರಿಗೆ ಸರ್ಕಾರ ನೆರವಾಗಬೇಕು ಎಂದು ಹೆಚ್.ಕೆ ಪಾಟೀಲ್ ಆಗ್ರಹಿಸಿದರು.

Key words: gadaga- rain-flood-MLA-H.K Patil