ಗಣೇಶ ಚತುರ್ಥಿ ಹಾಗೂ ಮೊಹರಂ ಆಚರಣೆಗೆ ನಿರ್ಬಂಧ- ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ…

ಮೈಸೂರು,ಆ,15,2020(www.justkannada.in): ಜಿಲ್ಲೆಯಲ್ಲಿ  ಕೊರೋನಾ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಮುಂಬರುವ ಗಣೇಶ ಚತುರ್ಥಿ ಹಾಗೂ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಹೇಳಿದರು.jk-logo-justkannada-logo

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣೇಶ ಚತುರ್ಥಿ ಹಾಗೂ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ, ವಿಸರ್ಜನೆಗೆ ಅವಕಾಶವಿಲ್ಲ. ದೇಗುಲದಲ್ಲಿ, ಮನೆಯೊಳಗೆ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶವಿದೆ. ಮನೆಯಲ್ಲಿ ಕೂರಿಸುವ ಮೂರ್ತಿಗಳನ್ನು ಮನೆಯಲ್ಲೇ ವಿಸರ್ಜನೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಹಾಗೆಯೇ ದೇಗುಲದಲ್ಲಿ ಕೂರಿಸುವ ಗಣಪತಿಯನ್ನು ಸರ್ಕಾರದ ಮಾರ್ಗಸೂಚಿ ಪ್ರಕಾರ ದೇಗುಲದೊಳಗೇ ವಿಸರ್ಜನೆ ಮಾಡಬೇಕು ಎಂದು ಸೂಚಿಸಿದರು.Ganesh Chaturthi –Moharram- Restriction- Mysore - Police Commissioner- Chandragupta.

Key words: Ganesh Chaturthi –Moharram- Restriction- Mysore – Police Commissioner- Chandragupta.