ಗಣೇಶ ಮೂರ್ತಿ ಪ್ರತಿಷ್ಟಾಪನೆ ನಿಯಮ ಸಡಿಲಿಕೆ ಬಗ್ಗೆ ಸಂಜೆಯೊಳಗೆ ತೀರ್ಮಾನ-ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಗೌರಿ ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ನಿಯಮ ಸಡಿಲಿಕೆ ಬಗ್ಗೆ ಸರ್ಕಾರ ಚಿಂತನೆ ಮಾಡಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಗಣೇಶ ಮೂರ್ತಿ ಪ್ರತಿಷ್ಟಾಪನೆ ನಿಯಮ ಸಡಿಲಿಕೆ ಬಗ್ಗೆ ಸಂಜೆಯೊಳಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಕೆಲವೊಂದು ನಿರ್ಧಾರವನ್ನ ಮಾಡಿದೆ. ಬಿಬಿಎಂಪಿ ಕೆಲವೊಂದು ನಿರ್ಧಾರವನ್ನ ಕೈಗೊಂಡಿದೆ. ಬೆಂಗಳೂರು ನಗರ ಸಚಿವರೊಂದಿಗೆ ಮಾತನಾಡುತ್ತೇನೆ. ಇನ್ನು ಜಿಲ್ಲೆಗಳಿಂದಲೂ ವಿವಿಧ ಬೇಡಿಕೆಗಳು ಬರುತ್ತಿವೆ. ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಜೆಯೊಳಗೆ ಒಂದು ಅಂತಿಮ ತೀರ್ಮಾನಕ್ಕೆ ಬರುತ್ತೇವೆ ಎಂದು ತಿಳಿಸಿದರು.

Key words: Ganesha festival-covid rule-evenings – CM Basavaraja Bommai