ಗಣೇಶ ಹಬ್ಬ ಹಿನ್ನೆಲೆ: ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ಚಳ.

ಬೆಂಗಳೂರು, ಸೆಪ್ಟಂಬರ್.16,2023(www.justkannada.in): ಪ್ರತಿ ಬಾರಿ ಹಬ್ಬ ಹರಿದಿನಗಳಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರಿಗೆ ದುಪಟ್ಟು ಹಣ ವಸೂಲಿ ಮಾಡುತ್ತವೆ. ಇದೀಗ ಸೆಪ್ಟಂಬರ್ 18 ರಂದು  ಗಣೇಶ ಹಬ್ಬ ಹಿನ್ನೆಲೆ   ಖಾಸಗಿ ಬಸ್ ಮಾಲೀಕರು ಟಿಕೆಟ್ ದರಗಳಲ್ಲಿ ಭಾರೀ ಹೆಚ್ಚಳ ಮಾಡಿದ್ದಾರೆ.

ಬೆಂಗಳೂರಿನಿಂದ ಬಳ್ಳಾರಿ, ಶಿವಮೊಗ್ಗ, ಬೆಳಗಾವಿ, ವಿಜಯಪುರ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಿಗೆ ತೆರಳುವ ಬಸ್​ಗಳ ದರ ಹೆಚ್ಚಿಸಲಾಗಿದೆ. ಇನ್ನು ದುಪ್ಪಟ್ಟು ಹಣ ಪಡೆಯದಂತೆ ಟಿಕೆಟ್ ಬುಕ್ಕಿಂಗ್ ಕಂಪನಿಗಳಿಗೆ ಸಾರಿಗೆ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದರು. ಆದರೂ ಸಹ  ಗಣೇಶ ಹಬ್ಬ ಸಮೀಪಿಸುತ್ತಿದ್ದಂತೆ ಸಾಮಾನ್ಯ ದಿನಗಳಲ್ಲಿ 500-700 ರೂಪಾಯಿ ಇದ್ದ ಟಿಕೆಟ್ ದರವನ್ನು 1500- 2500 ರೂಪಾಯಿಗೆ ಹೆಚ್ಚಳ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗಣೇಶ ಹಬ್ಬದ ಹಿಂದಿನ‌ ದಿನ‌ ಊರಿಗೆ ಹೋಗಬೇಕೆಂದರೇ  ಎರಡು-ಮೂರು ಪಟ್ಟು ಹೆಚ್ಚು ಹಣ ಕೊಟ್ಟು ತೆರಳಬೇಕು. ನಗರದ ಪ್ರದೇಶದಲ್ಲಿ ದುಡಿಯಲು ಬಂದಿರುವ ಜನರು ಇಂದು ಕೆಲಸ ಮುಗಿಸಿ ತಮ್ಮ ತಮ್ಮ ಊರಿಗೆ ತೆರಳುತ್ತಾರೆ  ಇದನ್ನೇ ನೆಪ ಮಾಡಿಕೊಂಡು ಖಾಸಗಿ ಬಸ್ ಟಿಕೆಟ್ ದರಗಳನ್ನು ದುಪ್ಪಟ್ಟು ಹೆಚ್ಚಳ ಮಾಡಿದ್ದಾರೆ ಎನ್ನಲಾಗಿದೆ.

Key words: Ganesha festival -: Increase – ticket- price – private buses