Sunday, August 9, 2026

BDA Apartments

Home Front Page ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ: ಸರ್ಕಾರದ ನಿರ್ಧಾರ ಸೂರ್ಯ ಚಂದ್ರ ಇರುವವರೆಗೂ ಇರುತ್ತೆ- ಸಚಿವ...

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ: ಸರ್ಕಾರದ ನಿರ್ಧಾರ ಸೂರ್ಯ ಚಂದ್ರ ಇರುವವರೆಗೂ ಇರುತ್ತೆ- ಸಚಿವ ಆರ್.ಅಶೋಕ್.

ಬೆಂಗಳೂರು,ಆಗಸ್ಟ್,27,2022(www.justkannada.in): ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಭೆ ನಡೆಸಿ ಚರ್ಚಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಸರ್ಕಾರದ ನಿರ್ಧಾರ ಸೂರ್ಯ ಚಂದ್ರ ಇರುವವರೆಗೂ ಇರುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರಕ್ಕೆ ಸಂಬಂಧಿಸಿದಂತೆ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಭೆ ನಡೆಯುತ್ತಿದೆ.  ಸಭೆಗೂ ಮುನ್ನ ಮಾತನಾಡಿದ ಸಚಿವ ಆರ್.ಅಶೋಕ್,  ಇಂದು ಕೋರ್ಟ್ ಆದೇಶದ ಬಗ್ಗೆ ಚರ್ಚೆ ಮಾಡುತ್ತೇವೆ. ಡಿಜಿಪಿ ,ಪೊಲೀಸ್ ಆಯುಕ್ತರು ಬಿಬಿಎಂಪಿ ಆಯುಕ್ತರು  ಕಂದಾಯ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇವೆ.

ಈ ಕುರಿತು ಇಂದು ವರದಿಕೊಡುತ್ತಾರೆ 75 ವರ್ಷ ಏನು ಮಾಡಲಾಗದ ಕಾರ್ಯ ಮಾಡಬೇಕಿದೆ. ಸರ್ಕಾರದ ನಿರ್ಧಾರದ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತೆ., ಸೂರ್ಯ ಚಂದ್ರ ಇರುವವರೆಗೂ ಈ ತೀರ್ಮಾನ ಇರುತ್ತೆ ಎಂದು ಸಚಿವ ಅಶೋಕ್ ತಿಳಿಸಿದರು.

Key words: Ganeshotsav -celebrations -Idga Maidan:-Government-Minister- R. Ashok.