Wednesday, October 7, 2026

BDA Apartments

ಒಳ್ಳೆಯತನದ ನಮ್ಮ ವರಾಳೆ ಸಾಹೇಬರು BDA JK_Adv BDA Adv
Home Front Page ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸುಪ್ರೀಂಕೋರ್ಟ್ ಸಿಜೆಐ ನೇತೃತ್ವದ ಪೀಠಕ್ಕೆ ವರ್ಗಾವಣೆ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿಚಾರ: ಸುಪ್ರೀಂಕೋರ್ಟ್ ಸಿಜೆಐ ನೇತೃತ್ವದ ಪೀಠಕ್ಕೆ ವರ್ಗಾವಣೆ

ನವದೆಹಲಿ,ಆಗಸ್ಟ್,30,2022(www.justkannada.in): ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ಧ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು ಪ್ರಕರಣವನ್ನ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ.

ಹೈಕೋರ್ಟ್ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ವಕ್ಫ್ ಬೋರ್ಡ್ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನ ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ  ದ್ವಿಸದಸ್ಯ ಪೀಠದಲ್ಲಿ ನಡೆಸಲಾಗಿತ್ತು. ಆದರೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿರುವ ಪೀಠ ಇದೀಗ ಪ್ರಕರಣವನ್ನ ಮುಖ್ಯನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದೆ.

ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ.

Key words: Ganeshotsava – Idga Maidan- Supreme Court- refused – stay – High Court- order.