ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆದಷ್ಟು ಬೇಗ ಆರೋಪಿಗಳನ್ನ ಬಂಧಿಸುತ್ತೇವೆ-ಗೃಹ ಸಚಿವ ಅರಗ ಜ್ಞಾನೇಂದ್ರ.

ಬೆಂಗಳೂರು,ಆಗಸ್ಟ್,26,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ಆದಷ್ಟು ಬೇಗ ಬಂಧಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ಈ ಕುರಿತು ಮಾಧ್ಯ,ಮಗಳ ಜತೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಇದು ನಿಜಕ್ಕೂ ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದು. ಶಾಂತಿಯುತ ಪ್ರದೇಶದಲ್ಲಿ ಈ ರೀತಿ ಆಗಬಾರದು. ಪೊಲೀಸರು ಎಫ್ ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಶೀಘ್ರವೇ ಆರೋಪಿಗಳನ್ನ ಬಂಧಿಸಲಾಗುವುದು ಎಂದರು.

Key words: Gang rape- case – Mysore –arrest – accused – Home Minister -Araga Ganendra