ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ  ಸಿಎಂ ಬೊಮ್ಮಾಯಿ ಸೂಚನೆ.

ನವದೆಹಲಿ,ಆಗಸ್ಟ್,25,2021(www.justkannada.in):  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ ರೇಪ್​ ಪ್ರಕರಣ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಆರೋಪಿಗಳು ಯಾರೇ ಆಗಿದ್ದರೂ ಕಠಿಣ ಕ್ರಮಕ್ಕೆ ಆದೇಶ ನೀಡಲಾಗುವುದು. ಈ ಕುರಿತು ಸೂಕ್ತ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

ಇನ್ನು  ಕರ್ನಾಟಕ ರಾಜ್ಯದ ಯೋಜನೆಗಳ ಸಂಬಂಧ ಚರ್ಚಿಸಲು ದೆಹಲಿಗೆ ಬಂದಿದ್ದೇನೆ. ಕೃಷಿ ಸಚಿವರು, ಜಲಶಕ್ತಿ ಸಚಿವರನ್ನು ಭೇಟಿಯಾಗುತ್ತೇನೆ. ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ಮಾಡಲಿದ್ದೇನೆ. ಮೇಕೆದಾಟು, ಮಹದಾಯಿ ಯೋಜನೆಗಳ ಕುರಿತು ಚರ್ಚಿಸುತ್ತೇನೆ. ನಾಳೆ (ಆಗಸ್ಟ್ 26) ಬೆಳಗ್ಗೆ ಲೀಗಲ್​ ಟೀಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅದಾದ ಬಳಿಕ ನಿತಿನ್ ಗಡ್ಕರಿ ಹಾಗೂ ವಿತ್ತ ಸಚಿವರನ್ನು ಭೇಟಿಯಾಗ್ತೇವೆ. ಆರೋಗ್ಯ ಸಚಿವರನ್ನು ಭೇಟಿಯಾಗಿ ಲಸಿಕೆ ಕುರಿತು ಚರ್ಚೆ ನಡೆಸುತ್ತೇನೆ. ರಾಜ್ಯಕ್ಕೆ ಹೆಚ್ಚು ಲಸಿಕೆ ನೀಡುವ ಬಗ್ಗೆ ಮಾತನಾಡುತ್ತೇನೆ. ಸೆಪ್ಟಂಬರ್ 5 ಕ್ಕೆ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ​​ ವಿತರಣೆ ಹಿನ್ನೆಲೆಯಲ್ಲಿ, ಇಂದು ಕೃಷಿ ಇಲಾಖೆ ಸಚಿವರನ್ನು ಭೇಟಿ ಮಾಡಲಿದ್ದೇನೆ. ಕೃಷಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ  ತಿಳಿಸಿದ್ದಾರೆ.

Key words: Gang rape -case – Mysore-CM Bommai- instructs – take – action.