ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಘಟನಾ ಸ್ಥಳಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಭೇಟಿ ಪರಿಶೀಲನೆ.

ಮೈಸೂರು,ಸೆಪ್ಟಂಬರ್,1,2021(www.justkannada.in): ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೈಸೂರಿನ ಲಲಿತಾದ್ರಿಪುರ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌ ನಡೆದಿತ್ತು. ವಿದ್ಯಾರ್ಥಿನಿ ಮೇಲೆ ತಮಿಳುನಾಡು ಮೂಲದ ಏಳು ಮಂದಿ ಸಾಮೂಹಿಕ ಅತ್ಯಾಚಾರ  ನಡೆಸಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಕರಣ ಸಂಬಂಧ ಪೊಲೀಸರಿಂದ ಮಾಹಿತಿ ಸಂಗ್ರಹಿಸಿದರು. ಡಿಸಿಪಿ ಪ್ರದೀಪ್ ಗುಂಟಿ ಹಾಗೂ ಗೀತಾ ಪ್ರಸನ್ನ ಅವರು ಪ್ರಕರಣ ಕುರಿತು ಮಾಹಿತಿ ನೀಡಿದರು.

ಈ ವೇಳೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ, ,ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ್ ನಾಥ್ ಉಪಸ್ಥಿತರಿದ್ದರು.

Key words: Gang rape –case- Mysore-Former CM- Siddaramaiah –visits- inspection