ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು.

ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ.

ಆರೋಪಿಗಳು ತಮಿಳುನಾಡು ಮೂಲದ ಒಬ್ಬ ಹಾಗೂ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಬಳಿಕ ಮಾರನೇ ದಿನ ಮೈಸೂರಿನಲ್ಲಿದ್ದ ಈ ನಾಲ್ವರು ವಿದ್ಯಾರ್ಥಿಗಳು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬುಧವಾರ ನಡೆದ ಪರೀಕ್ಷೆಗೂ ಕೂಡ ಈ ನಾಲ್ವರು ಗೈರಾಗಿದ್ದರು ಎನ್ನಲಾಗಿದೆ.

ಈ ಸುಳಿವಿನ ಆಧಾರದ ಮೇಲೆ ಆರೋಪಿಗಳ ಬೆನ್ನು ಬಿದ್ದಿರುವ ಮೈಸೂರು ಪೊಲೀಸರ ತಂಡ, ಪರಾರಿಯಾಗಿರುವ ನಾಲ್ವರು ವಿದ್ಯಾರ್ಥಿಗಳನ್ನ ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ENGLISH SUMMARY…

Gang rape case in Mysuru: Police discover clues about the criminals
Mysuru, August 27, 2021 (www.justkannada.in): The Police who are investigating the case of gang rape in Mysuru that has shaken the entire state have discovered clues about the criminals.
The police have suspected four students who are studying in a private Engineering College in Mysuru.
Among them, one is said to be from Tamil Nadu, and three are from Kerala. All four have left Mysuru as soon as the news spread. They have not attended the exams that were held on Wednesday, it is learnt.
The team of police who are investigating the case, are on the lookout for them based on these clues. They have gone to Kerala and Tamil Nadu to arrest them.
Keywors: Gang rape/ Mysuru/ police/ discover clues/ four/ engineering students/ private college

Key words:  gang rape- case-mysore- Police- found -clue – accused.