Sunday, August 23, 2026

BDA Apartments

Home Front Page ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ.

ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಬಂಧನ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ.

ಮೈಸೂರು,ಆಗಸ್ಟ್,27,2021(www.justkannada.in): ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಮೈಸೂರು ಕನ್ನಡ ವೇದಿಕೆಯಿಂದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮೈಸೂರು ಕನ್ನಡ ವೇದಿಕೆಯ ಅಧ್ಯಕ್ಷ ಬಾಲು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು. ಮೈಸೂರು ಪೊಲೀಸ್ ಇಲಾಖೆಗೆ ಸರ್ಜರಿ ಆಗಲಿ. ಗೃಹ ಇಲಾಖಾ ಸಚಿವರು ರಾಜೀನಾಮೆ ನೀಡುವಂತೆ ಆಗ್ರಹಿಸಿದರು.

ಸಾಮೂಹಿಕ ಅತ್ಯಾಚಾರ ಪ್ರಕರಣ  ಖಂಡಿಸಿ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ಹುಮನ್ ರೈಟ್ಸ್ ಅವೆರ್ನೆಸ್ ಕಮಿಟಿ ವತಿಯಿಂದ ಕಾಲೇಜು ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಆರೋಪಿಗಳನ್ನ ಬಂಧಿಸಿ ಸಂತ್ರಸ್ತೆಗೆ ನ್ಯಾಯ ಒದಗಿಸಲು ಪ್ರತಿಭಟನಾಕಾರರು ಮನವಿ ಮಾಡಿದರು.

Key words: Gang rape- case – Mysore-Protest