Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Crime ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಕೋಲಾರ,ಫೆಬ್ರವರಿ,18,2023(www.justkannada.in): ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ  ವಿಧಿಸಿ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಆನಂದ್, ಕಾಂತರಾಜು, ಪ್ರವೀಣ್, ವೇಣುಗೆ ಜೀವಾವಧಿ ಶಿಕ್ಷೆಗೆ ಗುರಿಯಾದವರು.  2022ರ ಫೆಬ್ರವರಿಯಲ್ಲಿ ನಾಲ್ವರು ಅಪರಾಧಿಗಳು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ವಿಚಾರಣೆ ನಡೆಸಿದ ಕೋಲಾರದ ಪೋಕ್ಸೋ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಬಿಪಿ ದೇವಮಾನೆ ಅವರು ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Key words: gang rape – minor girl-kolar- Four –convicts- sentenced – life imprisonment.