ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮೂವರ ಬಂಧನ.

ಮಂಡ್ಯ,ನವೆಂಬರ್,10,2023(www.justkannada.in):  ಮಂಡ್ಯ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿ ಬಂದಿದ್ದು ಪ್ರಕರಣ ಸಂಬಂಧ ಮೂವರನ್ನ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮದ್ದೂರು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನವೆಂಬರ್ 4 ರಂದು ಮೂವರು ಯುವಕರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದ್ದು ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

ಮೈಸೂರು ಯುವ ದಸರಾ ವೇಳೆ ಸಂತ್ರಸ್ತ ಬಾಲಕಿಯನ್ನ ಆರೋಪಿ ಪರಿಚಯ ಮಾಡಿಕೊಂಡಿದ್ದು ಪ್ರೀತಿಸುವುದಾಗಿ  ನಂಬಿಕೆ ಹುಟ್ಟಿಸಿದ್ದಾನೆ. ಇದಾದ ಬಳಿಕ ಅಪ್ರಾಪ್ತ ಬಾಲಕಿಯನ್ನ  ಮದ್ದೂರು ಲಾಡ್ಜ್ ಗೆ  ಕರೆದೊಯ್ದು ಪರಿಚಿತ ಆರೋಪಿ ಸೇರಿ ಮೂವರು ಯುವಕರು  ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದರು ಎನ್ನಲಾಗಿದೆ. ಬಳಿಕ ವಿಡಿಯೋ ತೋರಿಸಿ ಕರೆದಾಗ ಬರುವಂತೆ ಸಂತ್ರಸ್ತ ಬಾಲಕಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಬಾಲಕಿ ತಂದೆ ಮದ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ದೂರಿನ ಮೇರೆಗೆ ಪೊಲೀಸರು ಮೂವರನ್ನ ಬಂಧಿಸಿದ್ದಾರೆ ಎನ್ನಲಾಗಿದೆ.

Key words:   Gang rape – minor girl-Three- arrested-mandya