ಕೇಂದ್ರದಿಂದ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆ ಘೋಷಣೆ: ಆರು ರಾಜ್ಯಗಳು ಮಾತ್ರ ಆಯ್ಕೆ…

ನವದೆಹಲಿ,ಜೂ,18,2020(www.justkannada.in):  ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆಯನ್ನ ಘೋಷಣೆ ಮಾಡಿದೆ.

ಈ ಕುರಿತು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಲಸೆ ಕಾರ್ಮಿಕರಿಗಾಗಿ ಗರೀಬ್ ಕಲ್ಯಾಣ್ ರೋಜ್ ಗಾರ್ ಯೋಜನೆ ಘೋಷಣೆ ಮಾಡಲಾಗಿದೆ.  ವರ್ಷದ 125 ದಿನ ವಲಸೆ ಕಾರ್ಮಿಕರಿಗೆ ಉದ್ಯೋಗ. ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ತಿಳಿಸಿದರು.garib-kalyan-rozgar-project-announced-central-government

ಆರು ರಾಜ್ಯಗಳ(ಬಿಹಾರ, ಉತ್ತರ ಪ್ರದೇಶ, ಮಧ್ಯಪ್ರದೇಶ, ಝಾರ್ಖಾಂಡ್, ರಾಜಸ್ತಾನ, ಒಡಿಶಾ)   116 ಜಿಲ್ಲೆಗಳನ್ನ ಈ ಯೋಜನೆಗೆ ಆಯ್ಕೆ ಮಾಡಲಾಗಿದೆ. ಜೂನ್ 20 ರಂದು ಪ್ರಧಾನಿ ನರೇಂದ್ರ ಮೋದಿ ಬಿಹಾರದ ಕಗಾರಿಯಾದಲ್ಲಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

Key words: Garib Kalyan Rozgar Project- Announced -Central Government