ಬಿಬಿಎಂಪಿ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆ…

ಬೆಂಗಳೂರು,ಅ,1,2019(www.justkannada.in):  ಬಿಬಿಎಂಪಿ ನೂತನ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಎಂ. ಗೌತಮ್ ಕುಮಾರ್ ಆಯ್ಕೆಯಾಗಿದ್ದಾರೆ.

ಪ್ರಾದೇಶಿಕ ಆಯುಕ್ತ ಹರ್ಷಗುಪ್ತಾ ನೇತೃತ್ವದಲ್ಲಿ ನಡೆದ ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ  ಬಿಬಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಪರ  129 ಮತಗಳು  ಕಾಂಗ್ರೆಸ್ ಅಭ್ಯರ್ಥಿ ಸತ್ಯನಾರಾಯಣ್ ಗೆ 112 ಮತಗಳು ಚಲಾವಣೆಯಾದವು.  ಈ ಮೂಲಕ ನೂತನ ಮೇಯರ್ ಆಗಿ ಗೌತಮ್ ಕುಮಾರ್ ಆಯ್ಕೆಯಾದರು.

ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಜೋಗುಪಾಳ್ಯ ವಾರ್ಡ್ ನ ಪಾಲಿಕೆ ಸದಸ್ಯ ಎಂ ಗೌತಮ್ ಕುಮಾರ್ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿತ್ತು. ಉಪಮೇಯರ್ ಸ್ಥಾನಕ್ಕೆ ಗುರುಮೂರ್ತಿ ರೆಡ್ಡಿ ಕಣಕ್ಕಿಳಿದಿದ್ದರು. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಪಕ್ಷದಿಂದ ಮೇಯರ್ ಅಭ್ಯರ್ಥಿಯಾಗಿ ಆರ್.ಎಸ್ ಸತ್ಯನಾರಾಯಣ , ಉಪಮೇಯರ್ ಅಭ್ಯರ್ಥಿಯಾಗಿ ಉಪಮೇಯರ್ ಅಭ್ಯರ್ಥಿ ಗಂಗಮ್ಮ ನಾಮಪತ್ರ ಸಲ್ಲಿಸಿದ್ದರು.

Key words: Gautam Kumar- elected –BBMP- new mayor.