ಗೀತಾ ಶಿವರಾಜ್ ಕುಮಾರ್  ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು,ಏಪ್ರಿಲ್,28,2023(www.justkannada.in):  ಮಾಜಿ ಸಿಎಂ ದಿ. ಎಸ್. ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾದರು. ಹಾಗಯೇ ಮಾಜಿ ಶಾಸಕ ಬಿಬಿ ನಿಂಗಯ್ಯ  ಸಹ ಕಾಂಗ್ರೆಸ್ ಸೇರ್ಪಡೆಯಾದರು.

ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್,  ನಾನು ಸುಮಾರು ಗಾಳ ಹಾಕಿ ಹಾಕಿ ಸುಸ್ತಾಗಿದ್ದೆ  ದೊಡ್ಡ ಬಲೆ ಹಾಕಿ ಈಗ ಗೀತಾ ಶಿವರಾಜ್ ಕುಮಾರ್ ರನ್ನ ಬೀಳಿಸಿದ್ದೇನೆ.  ಕಾಂಗ್ರೆಸ್ ಪರವಾಗಿ ಗೀತಾ ಶಿವರಾಜ್ ಕುಮಾರ್  ಅವರಿಗೆ ಸ್ವಾಗತ. ಗೀತಾಶಿವರಾಜ್ ಕುಮಾರ್ ಕಾಂಗ್ರೆಸ್ ಸೇರಿದ್ದರಿಂದ ಪಕ್ಷಕ್ಕೆ ಮತ್ತಷ್ಟು ಅನುಕೂಲವಾಗುತ್ತದೆ ಎಂದು ಹೇಳಿದರು.

Key words:  Geeta Shivaraj Kumar –joins- Congress.