ನಾಳೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು,ಏಪ್ರಿಲ್,27,2023(www.justkannada.in):  ಮಾಜಿ ಸಿಎಂ ದಿ. ಎಸ್. ಬಂಗಾರಪ್ಪಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಅವರ ಪತ್ನಿ  ಗೀತಾ ಶಿವರಾಜ್ ಕುಮಾರ್ ಅವರು ನಾಳೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಾಳೆ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಮಧುಬಂಗಾರಪ್ಪಅವರ ಪರ ಪ್ರಚಾರ ನಡೆಸಲಿದ್ದಾರೆ ಎ‍ನ್ನಲಾಗಿದೆ.

ಗೀತಾ ಶಿವರಾಜ್ ಕುಮಾರ್ ಅವರು ಜೆಡಿಎಸ್ ನಿಂದ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದರು.

Key words: Geetha Shivakumar -joins –Congress- tomorrow.