“ಜಿಲೆಟಿನ್ ಸ್ಪೋಟ ದುರಂತ : ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ”

ಬೆಂಗಳೂರು,ಜನವರಿ,22,2021(www.justkannada.in) : ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.jk

ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

“ಅಕ್ರಮ ಗಣಿಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ”- ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು. ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.Gelatin-explosion-CM orders high-level-probe

ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದ್ದಾರೆ.

key words : Gelatin-explosion-CM orders high-level-probe