ಪಕ್ಷದಲ್ಲಿದ್ದರೆ ಸಂಭಾವಿತ, ಪಕ್ಷ ಬಿಟ್ರೆ ಕ್ರಿಮಿನಲ್ : ಸಿದ್ದು ಹೇಳಿಕೆಗೆ ಸಿ.ಟಿ.ರವಿ ಟಾಂಗ್

ಬೆಂಗಳೂರು,ಅಕ್ಟೋಬರ್,29,2020(www.justkannada.in) : ಮುನಿರತ್ನಗೆ ಎರಡು ಬಾರಿ ಟಿಕೆಟ್ ಕೊಟ್ಟು ಶಾಸಕ ಮಾಡಿದ ಪಾರ್ಟಿ ಯಾವುದು? ಅವರ ಪಕ್ಷದಲ್ಲಿದ್ದರೆ ಸಂಭಾವಿತ, ಪಾರ್ಟಿ ಬಿಟ್ರೆ ಕ್ರಿಮಿನಲ್ಲಾ ಎಂದು ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.jk-logo-justkannada-logo

ಬಿಜೆಪಿ ಅಭ್ಯರ್ಥಿ ಮುನಿರತ್ನ ಕ್ರಿಮಿನಲ್ ಹಿನ್ನಲೆಯವರು ಎಂದು ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಿ.ಟಿ.ರವಿ ಕಿಡಿಕಾರಿದ್ದಾರೆ.

2018ರ ಚುನಾವಣೆಯಲ್ಲಿ ಮುನಿರತ್ನ ಇಂದ್ರ, ಚಂದ್ರ, ದೇವೇಂದ್ರ 

ಮುನಿರತ್ನ  2018ರ ಚುನಾವಣೆಯಲ್ಲಿ ಇಂದ್ರ, ಚಂದ್ರ, ದೇವೇಂದ್ರ ಎಂದಿದ್ದರು. ಈಗ ಮುನಿರತ್ನ ಪಾರ್ಟಿ ಬಿಟ್ಟ ಕೂಡಲೇ ಬದಲಾಗುತ್ತಾರಾ? ಹಳೇ ವಿಡಿಯೋ ತೆಗೆದು ನೋಡಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹೇಗೆ ಮುನಿರತ್ನ ಪರ ಪ್ರಚಾರ ಮಾಡಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಟಿ.ಆರ್.ಪಿ ಹೆಚ್ಚಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ

ಡಿ.ಕೆ.ಶಿವಕುಮಾರ್ ಬಾಂಬೆಗೆ ಯಾಕೆ ಹೋಗಿದ್ದರು? ಶಾಸಕರನ್ನು ಮನವೊಲಿಸಿ ಕರೆತರ್ತಿನಿ ಅಂತ ತಾನೇ ಹೈಡ್ರಾಮ ಮಾಡಿ ಬಾಂಬೆಯಲ್ಲಿ ನಿಂತಿದ್ದು. ಇವರು ಸರಿ ಇಲ್ಲ ಎನ್ನುವುದಾದರೆ ಕರೆತರಲು ಯಾಕೆ ಹೋಗಿದ್ದರು? ಎಂದು ಪ್ರಶ್ನಿಸಿದ್ದಾರೆ.

ಎಲ್ಲಾ ಒಪ್ಪಿದ್ದಾರೆ ನಿಮ್ಮನ್ನೆ ಮಂತ್ರಿ ಮಾಡ್ತೀವಿ ಬನ್ನಿ ಎಂದು ಸಿದ್ದರಾಮಯ್ಯ ಯಾಕೆ ಹೇಳಿದ್ದರು? ತಮ್ಮ ಟಿ.ಆರ್.ಪಿ ಹೆಚ್ಚಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ಸಚಿವ ಸಿ.ಟಿ.ರವಿ ಕಿಡಿಕಾರಿದರು.

gentleman,party,party,left,out,criminal,C.T .Ravi,Tong

key words : gentleman-party-party-left-out-criminal-C.T .Ravi-Tong