ನಟಿ ರಶ್ಮಿಕಾಗೆ ಅನಾರೋಗ್ಯ: ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೆಂಗಳೂರು, ಸೆಪ್ಟೆಂಬರ್ 24, 2022 (www.justkannada.in): ನಟಿ ರಶ್ಮಿಕಾ ಮಂದಣ್ಣ ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ವಿಷಯ ಬಹಿರಂಗ ಪಡಿಸಿದ್ದಾರೆ. ಸದ್ಯ ರಶ್ಮಿಕಾ ಹೈದರಾಬಾದ್ ನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬ್ಯಾಕ್ ಟು ಬ್ಯಾಕ್ ಶೂಟಿಂಗ್​ನಲ್ಲಿ ಬ್ಯುಸಿಯಾಗಿರುವ ಕಾರಣದಿಂದ ರಶ್ಮಿಕಾ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ರಶ್ಮಿಕಾ ಆರೋಗ್ಯದಲ್ಲಿ ಆತಂಕ ಪಡುವಂತ ಸಮಸ್ಯೆ ಏನಿಲ್ಲ, ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

ಮೊಣಕಾಲಿನ ನೋವು ಹೆಚ್ಚಾದ ಕಾರಣ ಚಿಕಿತ್ಸೆ ಪಡೆಯಲು ರಶ್ಮಿಕಾ ಬಂದಿದ್ದರು. ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ್ದೇವೆ. ಸದ್ಯ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ ವೈದ್ಯರು ತಿಳಿಸಿದ್ದಾರೆ.