Thursday, August 13, 2026

BDA Apartments

Home Front Page ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಗಿಫ್ಟ್ ಕಾರ್ಡ್ ಹಂಚಿ ಆಮಿಷ- ಮಾಜಿ ಸಿಎಂ ಹೆಚ್.ಡಿಕೆ ಆರೋಪ

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಗಿಫ್ಟ್ ಕಾರ್ಡ್ ಹಂಚಿ ಆಮಿಷ- ಮಾಜಿ ಸಿಎಂ ಹೆಚ್.ಡಿಕೆ ಆರೋಪ

ಬೆಂಗಳೂರು, ಏಪ್ರಿಲ್ 26,2024 (www.justkannada.in): ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು  ಮತದಾರರಿಗೆ ಗಿಫ್ಟ್ ಕಾರ್ಡ್ ಹಂಚಿಕೆ ಮಾಡಿ ಆಮಿಷ ಒಡ್ಡುತ್ತಿದ್ದಾರೆ ಎಂದು  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಿಸಿದರು.

ಇಂದು ರಾಜ್ಯದಲ್ಲಿ  14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು,  ಕೇತಗಾನಹಳ್ಳಿ ಮತಗಟ್ಟೆಯಲ್ಲಿ ಮಾಜಿ ಸಿಎಂ ಹಾಗೂ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಮತದಾನ ಮಾಡಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಿನ್ನೆ ರಾತ್ರಿಯಿಂದಲೂ ಕಾಂಗ್ರೆಸ್ ನಾಯಕರು ಗಿಫ್ಟ್ ಕಾರ್ಡ್ ಹಂಚುತ್ತಿದ್ದಾರೆ. ಚುನಾವಣಾ ಆಯೋಗ ಯಾವುದೇ ಕ್ರಮ  ಕೈಗೊಂಡಿಲ್ಲ ಏನೇ ದೂರು ಕೊಟ್ಟರೂ ಉಪಯೋಗ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Key words: Gift card, Congress, elections, H.D.Kumaraswamy