ದಕ್ಷಿಣ ಕನ್ನಡ, ಆಗಸ್ಟ್, 29,2025 (www.justkannada.in): ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಗಿರೀಶ್ ಮಟ್ಟಣನವರ್ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಧರ್ಮಸ್ಥಳದ ಸಾಮೂಹಿಕ ವಿವಾಹದ ಬಗ್ಗೆ ಗಿರೀಶ್ ಮಟ್ಟಣ್ಣನವರ್ ಹೇಳಿಕೆ ನೀಡಿದ್ದು ಹೆಣ್ಣು ಮಕ್ಕಳ ಗೌರವಕ್ಕೆ ಧಕ್ಕೆ ತಂದಿರುವ ಆರೋಪದ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕಾವೇರಿ ಕೇದಾರನಾಥ್ ಅವರ ನೇತೃತ್ವದಲ್ಲಿ ದೂರು ನೀಡಲಾಗಿದೆ.
ಇನ್ನು ನಿನ್ನೆ ಸಹ ಮಾನವ ಹಕ್ಕುಗಳ ಆಯೋಗಕ್ಕೆ ಪ್ರತ್ಯೇಕ ದೂರು ಸಲ್ಲಿಕೆಗೆ ಸೂಚನೆ ನೀಡಲಾಗಿತ್ತು. ರಾಜ್ಯ ಮಹಿಳಾ ಆಯೋಗಕ್ಕೆ ಗಿರೀಶ್ ವಿರುದ್ಧ ದೂರು ದಾಖಲಾಗಿದ್ದು ಧರ್ಮಸ್ಥಳದ ಸಾಮೂಹಿಕ ವಿವಾಹದ ಕುರಿತು ಮಾತನಾಡಿದ್ದಾರೆ.
ಧರ್ಮಸ್ಥಳ ಕ್ಷೇತ್ರದಲ್ಲಿ ಸಾಮೂಹಿಕ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾದ ವಿಡಿಯೋ ಸಹಿತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ಮಟ್ಟಣ್ಣನವರ್ ಅವರು ಹೆಣ್ಣು ಮಕ್ಕಳ ಘನತೆಗೆ ಧಕ್ಕೆಯಾಗುವಂತೆ ಮಾತನಾಡಿದ್ದಾರೆ ಎಂಬ ಆರೋಪ ಮಾಡಲಾಗಿದೆ.
Key words: Complaint, against, Girish Mattannavar , State Women’s Commission